ನಮ್ಮನ್ನು ಅನುಸರಿಸಿ: Facebook Twitter Instagram YouTube

ಡಾ.ಗೊರೂರು ರಾಮಸ್ವಾಮಿ ಅಯ್ಯಂಗಾರ್

ಅಪ್‌ಲೋಡ್ ಮಾಡಿದ ದಿನಾಂಕ: 13-06-2026 08:50

ಡಾ.ಗೊರೂರು ರಾಮಸ್ವಾಮಿ ಅಯ್ಯಂಗಾರ್
ಡಾ.ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ೧೯೦೪ರ ಜುಲೈ ೪ರಂದು ಹಾಸನ ಜಿಲ್ಲೆಯ ಗೊರೂರು ಗ್ರಾಮದಲ್ಲಿ ಜನಿಸಿದರು. ಅವರ ತಂದೆ ಶ್ರೀನಿವಾಸ ಅಯ್ಯಂಗಾರ್, ತಾಯಿ ಲಕ್ಷಮ್ಮ. ತಮ್ಮ ಹಳ್ಳಿಯಲ್ಲಿ ಲೋಯರ್ ಸೆಕೆಂಡರಿ ಶಿಕ್ಷಣವನ್ನು ಮುಗಿಸಿದ ಗೊರೂರರು ಹಾಸನದ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಗಾಂಧೀಜಿಯವರ ಅಸಹಕಾರ ಚಳುವಳಿಯಿಂದ ಆಕರ್ಷಿತರಾಗಿ ಶಿಕ್ಷಣಕ್ಕೆ ವಿದಾಯ ಹೇಳಿದರು. ಅನಂತರ ಅವರು ಗಾಂಧೀಜಿಯ ಆಶ್ರಮವನ್ನು ಸೇರಿ, ಗುಜರಾತಿನ ವಿದ್ಯಾಪೀಠದ ವಿದ್ಯಾರ್ಥಿಯಾದರು. ಬಳಿಕ ಮದ್ರಾಸಿನ ‘ಲೋಕಮಿತ್ರ’ ಮತ್ತು ‘ಭಾರತಿ’ ಪತ್ರಿಕೆಗಳ ಕನ್ನಡ ಸಮಾಚಾರ ಲೇಖಕರಾಗಿ ಸ್ವಲ್ಪಕಾಲ ಕೆಲಸಮಾಡಿ, ಕೆಂಗೇರಿಯ ಗುರುಕುಲಾಶ್ರಮವನ್ನು ಸೇರಿದರು. ಹರಿಜನೋದ್ಧಾರ ಅದರ ಮುಖ್ಯ ಕಾರ್ಯವಾಗಿತ್ತು. ಅದನ್ನು ಗೊರೂರರು ಶ್ರದ್ಧೆಯಿಂದ ನಿರ್ವಹಿಸಿದರು. 

ಆನಂತರ ಬೆಂಗಳೂರಿನ ಅಖಿಲ ಭಾರತ ಚರಕ ಸಂಘದ ಖಾದಿ ವಸ್ತಾçಲಯದ ಸಂಚಾಲಕರಾದರು. ಅಲ್ಲಿಯೇ ಅವರ ಸಾಹಿತ್ಯ ಸೇವೆ ಮೊದಲಾಯಿತು. ೧೯೩೩ರಲ್ಲಿ ಗೊರೂರರು ತಮ್ಮ ಗ್ರಾಮಕ್ಕೆ ಮರಳಿ, ಮೈಸೂರು ಗ್ರಾಮ ಸೇವಾ ಸಂಘವನ್ನು ಸ್ಥಾಪಿಸಿ, ಖಾದಿ ಪ್ರಚಾರ, ಹರಿಜನೋದ್ಧಾರ, ವಯಸ್ಕರ ಶಿಕ್ಷಣ, ಗ್ರಾಮ ಕೈಗಾರಿಕೆಗಳು ಮುಂತಾದ ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿದರು. ೧೯೪೨ರ ‘ಚಲೇ ಜಾವ್’ ಚಳವಳಿಯಲ್ಲಿ ಅವರು ಭಾಗವಹಿಸಿ, ತುರಂಗವಾಸವನ್ನು ಅನುಭವಿಸಿದರು. ಸ್ವಾತಂತ್ರ‍್ಯ ಬಂದ ಮೇಲೆ ಮೈಸೂರಿನಲ್ಲಿ ಪ್ರಜಾ ಸರ್ಕಾರ ಸ್ಥಾಪನೆಗಾಗಿ ನಡೆದ ಚಳವಳಿಯಲ್ಲೂ ಭಾಗವಹಿಸಿದರು. ಅದು ಸ್ಥಾಪಿತವಾದ ಮೇಲೆ ಸುಮಾರು ಹನ್ನೆರಡು ವರ್ಷಗಳ ಕಾಲ ರಾಜ್ಯದ ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು.

ಸಾಹಿತ್ಯ ರಶ್ಮಿ, ಹೇಮಾವತಿ ತೀರದಲ್ಲಿ ಮತ್ತು ಇತರ ಪ್ರಬಂಧಗಳು, ಹಳ್ಳಿ ಚಿತ್ರಗಳು, ಬೆಟ್ಟದ ಮನೆಯಲ್ಲಿ ಮತ್ತು ಇತರ ಪ್ರಬಂಧಗಳು, ಗರುಡಗಂಬದ ದಾಸಯ್ಯ, ಕಥೆಗಳು ಮತ್ತು ವಿನೋದ ಚಿತ್ರಗಳು. ಪುನರ್ಜನ್ಮ, ಭಗವಾನ್ ಕೌಟಿಲ್ಯ, ಮಲೆನಾಡವರು, ಮೆರವಣಿಗೆ, ಕ್ರೌಂಚವಧೆ, ರಾಜನರ್ತಕಿ, ಊರ್ವಶಿ, ಹೇಮಾವತಿ ಮೊದಲಾದ ಕಾದಂಬರಿಗಳನ್ನು ಬರೆದಿದ್ದಾರೆ. ಆತ್ಮಕಥೆ, ಕೊನೆಷ್ಟೆöÊ ಕಥೆಗಳು, ಜಗತ್ತಿನ ಮಹದ್ವö್ಯಕ್ತಿಗಳು, ಮಹಾದೇವ ದೇಸಾಯಿಯವರ ಕೃತಿಗಳು, ಸತ್ಯ ಮತ್ತು ಅಹಿಂಸೆ, ಸಾಹಿತ್ಯ ಜೀವಾಳ ಕೃತಿಗಳನ್ನು ಅನುವಾದಿಸಿದ್ದಾರೆ. ಉಸುಬು, ಕನ್ಯಾಕುಮಾರಿ ಮತ್ತು ಇತರ ಕಥೆಗಳು, ಕಮ್ಮಾರ ವೀರಭದ್ರಾಚಾರಿ, ಗೋಪುರದ ಬಾಗಿಲು, ಬೆಸ್ತರ ಕರಿಯ, ವೈಯ್ಯಾರಿ, ಶಿವರಾತ್ರಿ ಹೀಗೆ ಅನೇಕ ಗೊರೂರು ಪುಸ್ತಕಗಳು ಪ್ರಕಟವಾಗಿವೆ. 
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದೇವರಾಜ ಬಹದ್ದೂರ್ ಪ್ರಶಸ್ತಿ, ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ಹೀಗೆ ಅನೇಕ ಪ್ರಮುಖ ಪ್ರಶಸ್ತಿಗಳು, ಪದವಿಗಳು ಅವರನ್ನರಸಿ ಬಂದಿದ್ದವು. ಹಲವಾರು ಕನ್ನಡ ಪ್ರೇಮಿಗಳ ಮನ ಗೆದ್ದಿದ್ದ ಇವರು ೧೯೯೧ರ ಸೆಪ್ಟೆಂಬರ್ ೯ರಂದು ಇಹಲೋಕ ತ್ಯಜಿಸಿದರು.

⬅ ಮುಖಪುಟ