ನಮ್ಮನ್ನು ಅನುಸರಿಸಿ: Facebook Twitter Instagram YouTube

ರಾಸ್ ಬಿಹಾರಿ ಬೋಸ್

ಅಪ್‌ಲೋಡ್ ಮಾಡಿದ ದಿನಾಂಕ: 10-12-2025 05:09

ರಾಸ್ ಬಿಹಾರಿ ಬೋಸ್
ನೇತಾಜಿ ಸುಭಾಶ್ ಚಂದ್ರ ಬೋಸ್ ಅವರು ಮುನ್ನಡೆಸಿದ ಇಂಡಿಯನ್ ನ್ಯಾಶನಲ್ ಆರ್ಮಿಯನ್ನು ಕಟ್ಟುವುದಕ್ಕೆ ಅಡಿಪಾಯವನ್ನು ಹಾಕಿದ ಮಹಾನ್ ಕ್ರಾಂತಿಕಾರಿ ರಾಸ್ ಬಿಹಾರಿ ಬೋಸ್. ರಾಸ್ ಬಿಹಾರಿ ಬೋಸ್ ಅವರು ಮೇ 25, 1886ರಂದು ಪಶ್ಚಿಮ ಬಂಗಾಳದ ಬುರ್ದ್ವಾನಿನ ಸುಬಲ್ದಹಾ ಹಳ್ಳಿಯಲ್ಲಿ ಜನಿಸಿದರು. ಬೋಸರು ತಮ್ಮ ಸಣ್ಣ ವಯಸ್ಸಿನಲ್ಲೇ ರೆವಲ್ಯೂಷನರಿ ಪಾರ್ಟಿಯನ್ನು ಸೇರಿದರು. ದೆಹಲಿ, ಉತ್ತರ ಪ್ರದೇಶ ಮತ್ತು ಪಂಜಾಬ್‌ಗಳಲ್ಲಿ ರಾಸ್ ಬಿಹಾರಿ ಬೋಸರು ಹಲವಾರು ಕ್ರಾಂತಿಕಾರಿಗಳೊಡನೆ ಬ್ರಿಟಿಷರ ವಿರುದ್ಧದ ಭೂಗತ ಚಟುವಟಿಕೆಗಳಲ್ಲಿ ನಿರತರಾಗಿದ್ದರು. ಭಾರತದ ವೈಸರಾಯ್ ಆಗಿದ್ದ ಲಾರ್ಡ್ ಹಾರ್ಡಿಂಜನ ಮೆರವಣಿಗೆಯ ಸಂದರ್ಭದಲ್ಲಿ ದೆಹಲಿಯ ಚಾಂದಿನಿ ಚೌಕದಲ್ಲಿ ಡಿಸೆಂಬರ್ 23, 1912 ರಂದು ಬಾಂಬ್ ಎಸೆದಾಗ ರಾಸ್ ಬಿಹಾರಿ ಬೋಸರ ಹೆಸರು ಪ್ರಖ್ಯಾತಿ ಪಡೆಯಿತು. ಈ ಬಾಂಬ್ ಎಸೆದ ನಂತರದಲ್ಲಿ ಬೋಸರು ಚಾಣಾಕ್ಷತನದಿಂದ ಪೊಲೀಸರ ಕಣ್ಣು ತಪ್ಪಿಸಿಕೊಂಡು ವಾರಾಣಾಸಿಯಲ್ಲಿ ಅವಿತು, ಗದರ್ ಪಕ್ಷದ ಕಾರ್ಯಕರ್ತರೊಡನೆ ಏಕಕಾಲದಲ್ಲಿ ಉತ್ತರ ಭಾರತದಲ್ಲೆಲ್ಲಾ ಧ್ವನಿಸುವಂತೆ ವಿವಿಧ ಕ್ರಾಂತಿಕಾರಕ ಹೋರಾಟಗಳಿಗೆ ಸೂತ್ರಧಾರಿಯಾದರು. ರಾಸ್ ಬಿಹಾರಿ ಬೋಸರ ಈ ಎಲ್ಲಾ ಯತ್ನಗಳನ್ನೂ ಬ್ರಿಟಿಷರು ಸದೆಬಡಿದು ಗದರ್ ಕ್ರಾಂತಿಕಾರರಲ್ಲಿ ಬಹಳಷ್ಟು ಜನರನ್ನು ಶಿಕ್ಷೆಗೆ ಒಳಪಡಿಸಿದರಾದರೂ ರಾಸ್ ಬಿಹಾರಿ ಬೋಸರನ್ನು ಮಾತ್ರ ಹಿಡಿಯಲಾಗಲಿಲ್ಲ. ಬ್ರಿಟಿಷರಿಗೆ ಚಳ್ಳೆಹಣ್ಣು ತಿನ್ನಿಸಿ ಜಪಾನಿಗೆ ತೆರಳಿದ್ದ ರಾಸ್ ಬಿಹಾರಿ ಬೋಸರ ಬಗ್ಗೆ ಆತಂಕಗೊAಡ ಬ್ರಿಟಿಷರು ಅಂತಾರಾಷ್ಟಿçÃಯ ಮಟ್ಟದಲ್ಲಿ ಅವರ ಬಂಧನಕ್ಕೆ ಯತ್ನಿಸಿಯೂ ವಿಫಲರಾದರು. ಇತ್ತ ಜಪಾನಿನಲ್ಲಿ ಭೂಗತನಾಗಿದ್ದುಕೊಂಡಿದ್ದ ಬೋಸರು ಬ್ರಿಟನ್ ವಿರೋಧಿ ದೇಶಗಳ ಸಖ್ಯ ಬೆಳೆಸಿಕೊಳ್ಳತೊಡಗಿದರು. ಇಂಡಿಯನ್ ಇಂಡಿಪೆಂಡೆನ್ಸ್ ಲೀಗ್: ಮಾರ್ಚ್ 1942ರಲ್ಲಿ ಇಂಡಿಯನ್ ಇಂಡಿಪೆAಡೆAಟ್ಸ್ ಲೀಗ್ ಸ್ಥಾಪನೆಗಾಗಿ ಬೋಸರು ಒಂದು ಸಮಾವೇಶವನ್ನು ನಡೆಸಿದರು. ಈ ಸಂಸ್ಥೆಯ ಮೊದಲ ಅಧಿವೇಶನ ಜೂನ್ 1942ರಲ್ಲಿ ಬ್ಯಾಂಕಾಕಿನಲ್ಲಿ ಜರುಗಿತು. ಈ ಸಮಾವೇಶದಲ್ಲಿ ಅವರಿಗೆ ಇಂಡಿಯನ್ ನ್ಯಾಷನಲ್ ಆರ್ಮಿ ಸ್ಥಾಪನೆಗಾಗಿನ ಅಧಿಕಾರವನ್ನು ನೀಡಲಾಯಿತು. ಈ ನಿಟ್ಟಿನಲ್ಲಿ ಅವರು ಜಪಾನಿನಲ್ಲಿದ್ದ ಯುದ್ಧ ಖೈದಿಗಳನ್ನು ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಹೋರಾಟದ ಸೈನಿಕರನ್ನಾಗಿ ಸಂಘಟಿಸಿದರು. 1943 ರಲ್ಲಿ ಸಿಂಗಪೂರಿನಲ್ಲಿ ಇಂಡಿಯನ್ ನ್ಯಾಷನಲ್ ಆರ್ಮಿಯ ನಾಯಕತ್ವವನ್ನು ರಾಸ್ ಬಿಹಾರಿ ಬೋಸರು ಸುಭಾಷ್ ಚಂದ್ರ ಬೋಸರಿಗೆ ವರ್ಗಾಯಿಸಿದರು. ರಾಸ್ ಬಿಹಾರಿ ಬೋಸರ ಒಟ್ಟೂ ಕ್ರಾಂತಿಕಾರಿ ಜೀವನದಲ್ಲಿ ಅವರ ಜೊತೆಗೆ ಸುಭಾಷ್ ಚಂದ್ರ ಬೋಸರಲ್ಲದೆ ಅರವಿಂದ್ ಘೋಷ್, ಖದಿರಾಮ್ ಬೋಸ್ ಬಾಘಾ ಜತಿನ್ ಮುಂತಾದ ಪ್ರಮುಖರೂ ಇದ್ದರು. ಲೇಖಕ, ಪತ್ರಕರ್ತರೂ ಆಗಿದ್ದ ರಾಸ್ ಬಿಹಾರಿ ಬೋಸರಿಗೆ ಜಪಾನ್ ಸರ್ಕಾರ ಆರ್ಡರ್ ಆಫ್ ದಿ ರೈಸಿನ್ಗ್ ಸನ್ ಎಂಬ ಗೌರವ ನೀಡಿತ್ತು. ದೇಶಕ್ಕಾಗಿ ತನ್ನ ಇಡೀ ಜೀವನವನ್ನು ಮುಡಿಪಾಗಿಟ್ಟು ಸ್ವಾರ್ಥರಹಿತ, ಕಷ್ಟಕರವಾದ ಕ್ರಾಂತಿಕಾರಕ ಮಾರ್ಗದಲ್ಲಿ ಬದುಕಿದ ರಾಸ್ ಬಿಹಾರಿ ಬೋಸರು ಜನವರಿ 21, 1945 ರಂದು ಟೋಕಿಯೋದಲ್ಲಿ ನಿಧನರಾದರು.
⬅ ಮುಖಪುಟ